Thursday, November 20, 2025
Menu

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ನಾಯಿ ಕಡಿತ ಘಟನೆಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದನ್ನು ಗಮನಿಸಿದ ಸುಪ್ರೀಂಕೋರ್ಟ್‌, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು (ಯುಟಿಗಳು) ಪ್ರತಿಯೊಂದು ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಸಾರ್ವಜನಿಕ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಿಂದ ಎಲ್ಲಾ ಬೀದಿ ನಾಯಿಗಳನ್ನು ಹೊರ ಹಾಕಬೇಕೆಂದು ಆದೇಶಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಈ ಆದೇಶ ನೀಡಿದ್ದು, ಬೀದಿ ನಾಯಿಗಳ ಪ್ರವೇಶವನ್ನು ತಡೆಯಲು ಈ ಎಲ್ಲಾ ಸಂಸ್ಥೆಗಳು ಮತ್ತು ಸ್ಥಳಗಳಿಗೆ ಸರಿಯಾಗಿ ಬೇಲಿ ಹಾಕಬೇಕು ಎಂದು ಹೇಳಿದೆ. ಕೆಲವು ಸಾರ್ವಜನಿಕ ಸ್ಥಳಗಳನ್ನು ಹೊರತುಪಡಿಸಿ ಲಸಿಕೆ ಹಾಕಿದ ನಾಯಿಗಳನ್ನು ಮತ್ತೆ ಅವುಗಳ ವಾಸಸ್ಥಾನಗಳಿಗೆ ಬಿಡಲು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

025ರ ಜುಲೈ ವರೆಗೆ ರಾಜ್ಯದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ, ಮತ್ತು 19 ಜನರು ರೇಬಿಸ್‌ನಿಂದ ಮೃತಪಟ್ಟಿದ್ದಾರೆ. ಬಿಬಿಎಂಪಿ ಸಂತಾನಹರಣ ಮತ್ತು ಲಸಿಕೆ ಕಾರ್ಯಕ್ರಮಗಳನ್ನು ನಡೆಸುತ್ತಿದೆ, ನಗರದ ಹೊರಭಾಗದಲ್ಲಿ ನಾಯಿ ಶೆಲ್ಟರ್‌ಗಳನ್ನು ನಿರ್ಮಿಸುವ ಮೂಲಕ ಸಮಸ್ಯೆಯನ್ನು ನಿಯಂತ್ರಿಸಲು ಮುಂದಾಗಿದೆ.

Related Posts

Leave a Reply

Your email address will not be published. Required fields are marked *