ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರು ತಡೆದು ತಪಾಸಣೆ ನಡೆಸಿದ ಪೊಲೀಸರು ಒಂಬತ್ತು ಕೋಟಿ ರೂಪಾಯಿ ಅಕ್ರಮ ನಗದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಆದಾಯ ಇಲಾಖೆ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಹಣದ ಬಂಡಲ್‌ಗಳು ಪತ್ತೆಯಾಗಿದೆ.
ಈ ಅಕ್ರಮ ಹಣವು ಸಿಂಧೂ ಜುವೆಲರ್ಸ್ ಮಾಲೀಕ ಸಚಿನ್ ಎಂಬವರಿಗೆ ಸೇರಿದ್ದಾಗಿದೆ. ತಮಿಳುನಾಡಿನ ತೂತುಕುಡಿ ಪ್ರದೇಶದಲ್ಲಿ ಸಿಂಧೂ ಜುವೆಲರ್ಸ್ ಇದ್ದು, ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.
ಹಣ ಮತ್ತು ಸಚಿನ್ ಎಂಬಾತನನನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದ ಬಳಿಕ ಆತನ ಮನೆ ಮೇಲೂ ದಾಳಿ ನಡೆಸಿದ್ದಾರೆ. ಮನೆಯಲ್ಲೂ 1.3 ಕೋಟಿ ನಗದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆದರೆ ಕಾರಿನಲ್ಲಿದ್ದ ಒಂಬತ್ತು ಕೋಟಿ ಹಣ ಯಾರಿಗೆ ಸೇರಿದ್ದು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ, ಪೊಲೀಸರು ದಾಖಲೆಗಳನ್ನು ಪರಿಶೀಲಿಸಿ ತನಿಖೆ ಚುರುಕುಗೊಳಿಸಿದ್ದಾರೆ.


