ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನೀಡದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ನ ಧಾರವಾಡ ಪೀಠಕ್ಕೆ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು, ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠವು ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಬಳ್ಳಿ ಕಮಿಷನರ್ಗೆ ನೋಟಿಸ್ ನೀಡಿದೆ.
2025 ರ ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್ಎಸ್ಎಸ್ ಪ್ರಶ್ನಿಸಿತ್ತು. ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ನ ಧಾರವಾಡ ಪೀಠ, ಅನುಮತಿಯಿಲ್ಲದೆ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಪ್ರವೇಶಕ್ಕೆ ನಿರ್ಬಂಧವಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿ ಹಕ್ಕನ್ನು ಸರ್ಕಾರ ಕಸಿದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದೆ.
ಚಿತ್ತಾಪುರ ಆರ್ಎಸ್ಎಸ್ ಪಥಸಂಚಲನ ವಿಚಾರವಾಗಿ ಹೈಕೋರ್ಟ್ನ ಕಲಬುರಗಿ ಪೀಠ ಈಗಾಗಲೇ ವಿಚಾರಣೆ ನಡೆಸಿದ್ದು, ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ತಿಳಿಸಿದೆ. ಸರ್ಕಾರ ಸಲ್ಲಿರುವ ವರದಿಯ ಆಧಾರದಲ್ಲಿ ತೀರ್ಪು ಬರಬೇಕಿದೆ.


