Tuesday, February 03, 2026
Menu

ಸಾಗರ ಮಾರಿಕಾಂಬ ಜಾತ್ರೆ: ದರ್ಶನಕ್ಕೆ ತೆರಳಿದ್ದ ಕಾಗೋಡು ತಿಮ್ಮಪ್ಪ ಅಸ್ವಸ್ಥ

ಸಾಗರ ಮಾರಿಕಾಂಬ ದೇವಿ ಜಾತ್ರೆಯ ಪ್ರಯುಕ್ತ ದೇವಿಯ ದರ್ಶನಕ್ಕೆ ತೆರಳಿದ್ದ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ವೇಳೆ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಕಾರಣ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ. ಅರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಮಾರಿಕಾಂಬಾ ದೇವಿಯ ಜಾತ್ರೆಯು ಫೆ.3ರಿಂದ 11ರವರೆಗೆ ನಡೆಯಲಿದೆ. ಇದು ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ. ಫೆ.4ರಿಂದ 11ರವರೆಗೆ ಧಾರ್ಮಿಕ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.  ಫೆ.6ರಿಂದ 8ರವರೆಗೆ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಪಟ್ಟಣದ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯಲಿದೆ.

ಇಂದು ರಾತ್ರಿ 9ಕ್ಕೆ ಅಮ್ಮನವರ ಉತ್ಸವಮೂರ್ತಿಯ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಲಿದ್ದು, ನಂತರ ಗಂಡನಮನೆ ಎದುರಿನ ಭವ್ಯ ಗದ್ದುಗೆಯಲ್ಲಿ ಪ್ರತಿಷ್ಠಾಪನೆ ನಡೆಯಲಿದೆ. ಭಕ್ತಾದಿಗಳಿಗೆ ಪ್ರತಿದಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಊಟದ ವ್ಯವಸ್ಥೆ ಇರುತ್ತದೆ. ಫೆ. 11ರಂದು ರಾತ್ರಿ ಅಮ್ಮನವರನ್ನು ವನಕ್ಕೆ ಬಿಡುವ ಶಾಸ್ತ್ರ ಇರುತ್ತದೆ.

Related Posts

Leave a Reply

Your email address will not be published. Required fields are marked *