Menu

ನಕಲಿ ಕಲಬೆರಕೆ ಪನೀರ್‌ ಮಾರಾಟ: ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಸಚಿವ ಜೋಶಿ ಪತ್ರ

ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ಅನೇಕ ದೂರುಗಳು ಬಂದಿವೆ. ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮಕೈಗೊಳ್ಳಿ ಎಂದು ಸಚಿವ ಜೋಶಿ ಕೇಂದ್ರ ಆರೋಗ್ಯ ಸಚಿವರಿಗೆ ಆಗ್ರಹಿಸಿದ್ದಾರೆ.

ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಇತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ಕಲಬೆರಕೆ ಪನೀರ್‌ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ಕಳವಳ ವ್ಯಕ್ತಪಡಿಸಿ, ಆಹಾರ ಗುಣಮಟ್ಟ ಮತ್ತು ಸುರಕ್ಷತೆ ಗಾಗಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಪತ್ರದಲ್ಲಿ ತಿಳಿಸಿದ್ದಾರೆ.

ಗ್ರಾಹಕರು ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಪೋರ್ಟಲ್‌ನಲ್ಲಿ ಹಲವು ದೂರುಗಳನ್ನು ದಾಖಲಿಸಿದ್ದಾರೆ. ನಕಲಿ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಸೇವನೆ ಯಿಂದ   ಜನರಿಗೆ ತೀವ್ರ ಮತ್ತು ದೀರ್ಘ ಕಾಲದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ, ಇದರ ವಿರುದ್ಧ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ. ಪನೀರ್‌ ಉತ್ಪಾದನಾ ಸಂಸ್ಥೆಗಳು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆ 2006ರ ಪ್ರಕಾರ ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *