Menu

ಖ್ಯಾತ ನಿರ್ದೇಶಕ ಎಟಿ ರಘು ಇನ್ನಿಲ್ಲ

ಮಂಡ್ಯದ ಗಂಡು ಸೇರಿದಂತೆ ಒಟ್ಟು 55 ಸಿನಿಮಾ ನಿರ್ದೇಶನ ಮಾಡಿದ್ದ ಬರಹಗಾರ, ಸಾಹಸ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳ್ತಿದ್ದ ಎಟಿ ರಘು (76) ಅನಾರೋಗ್ಯದಿಂದ ನಿಧನರಾದರು.

ಅಂಬರೀಶ್ ಅವರಿಗೆ 27 ಸಿನಿಮಾಗಳನ್ನು ರಘು ನಿರ್ದೇಶನ ಮಾಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್‌ ಮಾಡಿಕೊಳ್ಳುತ್ತಿದ್ದರು. ಆರ್ ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದ್ದು, ಮಧ್ಯಾಹ್ನ 2 ರಿಂದ 3 ಘಂಟೆ ಒಳಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

ಎಟಿ ರಘು ಅವರಿಗೆ ಪತ್ನಿ ಹಾಗೂ ಮಗಳು ಇದ್ದಾರೆ. ಎಟಿ ರಘು ಕೊಡಗಿನಲ್ಲಿ ಹುಟ್ಟಿದವರು. ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶನ ಮಾಡಿದ್ದಾರೆ. ರಘು ಅವರು ಹಿಂದಿ, ಮಲಯಾಳಂ ಚಿತ್ರರಂಗದಲ್ಲೂ ಕೆಲಸ ಮಾಡಿದ್ದಾರೆ. ‘ಆಶ’ ಚಿತ್ರವನ್ನು ಅವರು ಹಿಂದಿಗೆ ‘ಮೆರಿ ಅದಾಲತ್’ ಹೆಸರಿನಲ್ಲಿ ರಿಮೇಕ್ ಮಾಡಿದರು. ಇದರಲ್ಲಿ ರಜನಿಕಾಂತ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Related Posts

Leave a Reply

Your email address will not be published. Required fields are marked *