ಸ್ಯಾಂಡಲ್ ವುಡ್ ಪೋಷಕ ನಟ ಸಿದ್ದರಾಜ್ ಕಲ್ಯಾಣ್ಕರ್​​ ನಿಧನ

ಬೆಂಗಳೂರು: ಖ್ಯಾತ ಹಿರಿಯ ನಟ ಸಿದ್ದರಾಜ್ ಕಲ್ಯಾಣ್ಕರ್ ವಿಧಿವಶರಾಗಿದ್ದಾರೆ. 60 ವರ್ಷ ವಯಸ್ಸಿನ ಸಿದ್ದರಾಜ್ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತ ಉಂಟಾಗಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೂಲತಃ ಹುಬ್ಬಳ್ಳಿಯವರಾದ ಸಿದ್ದರಾಜ್ ನಾಟಕಗಳಿಂದ ಪ್ರಸಿದ್ಧಿ ಪಡೆದಿದ್ದರು. ಅನೇಕ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದರು. ಬುದ್ಧಿವಂತ, ಸೂಪರ್ ಸೇರಿದಂತೆ ಸುಮಾರು 75ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಸಿದ್ದರಾಜ್ ಇದ್ದಕ್ಕಿದ್ದಂತೆ ರಾತ್ರಿ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ ಎಂದು ನಿರ್ದೇಶಕ ಬೀಸು ಸುರೇಶ್​​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *