ಸಂದೇಶ್ ನಾಗರಾಜ್ ಸ್ನೇಹಮಯಿ ವ್ಯಕ್ತಿತ್ವದವರಾಗಿದ್ದು ಯಾವುದೇ ಕ್ಷೇತ್ರದಲ್ಲಿದ್ದರೂ ಯಶಸ್ಸು ಅವರಿಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಮಾಜಿ ವಿಧಾನ ಪರಿಷತ್ ಸದಸ್ಯರಾದ ಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
80 ವರ್ಷ ಪೂರೈಸಿ ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಇವರು ಶತಾಯುಷಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚು ಕಾಲ ಆರೋಗ್ಯಕರವಾಗಿ ಜೀವಿಸಲಿ ಎಂದು ಹಾರೈಸಿದರು. ರಾಜಕೀಯವಾಗಿ ಇಬ್ಬರೂ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಆದರೆ ಸ್ನೇಹಕ್ಕೆ ಯಾವತ್ತೂ ಧಕ್ಕೆ ಆಗಿಲ್ಲ ಎಂದರು.
ಕನ್ನಡದ ಖ್ಯಾತ ನಿರ್ಮಾಪಕರಾಗಿ ಹೆಸರು ಮಾಡಿರುವ ಸಂದೇಶ್ ನಾಗರಾಜ್ ಅವರು ವಿಧಾನಪರಿಷತ್ ಮಾಜಿ ಸದಸ್ಯರು. ಅವರ ೮೦ನೇ ಹುಟ್ಟುಹಬ್ಬದ ದಿನವಾದ ಇಂದು ಅವರ ಲೈಫ್ ಜರ್ನಿ ಬಗ್ಗೆ ಒಂದು ಡಾಕ್ಯುಮೆಂಟರಿ ಪ್ರದರ್ಶನಗೊಳ್ಳಲಿದೆ. ಸುಮಾರು 50,000 ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಹಲವು ರಾಜಕೀಯ ಮುಖಂಡರು, ನಟ ಸುದೀಪ್ ಸೇರಿದಂತೆ ಚಿತ್ರರಂಗದ ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.