Menu

“ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ” ಬ್ಯಾನ್‌: ಜೋಗಿ ಪ್ರೇಮ್‌ಗೆ ಚುರುಕು ಮುಟ್ಟಿಸಿದ ಕೇಂದ್ರ

ಜೋಗಿ ಪ್ರೇಮ್‌ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ ‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡಿಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು, ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದೆ.

ಈ ಹಾಡಿನ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವು ಸಾಂವಿಧಾನಿಕ ಮಿತಿಗಳಿಗೆ ಒಳಪಟ್ಟಿರುತ್ತದೆ. ಸಂವಿಧಾನವು ಸೂಚಿಸಿರುವ ನಿರ್ಬಂಧಗಳ ವ್ಯಾಪ್ತಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕಟ್ಟುನಿಟ್ಟಾಗಿ ಇರಬೇಕು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಹೇಳಿದ್ದಾರೆ.

ಹಾಡು ಬ್ಯಾನ್‌ ಆದ ಬೆನ್ನಲ್ಲೇ ನಿರ್ದೇಶಕ ಪ್ರೇಮ್‌ ಅವರನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ಕರೆಸಿಕೊಂಡಿದ್ದು, ಸಭೆಯಲ್ಲಿ ನಾನು ವಿರೋಧದ ಅಂಶದ ಬಗ್ಗೆ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ದಾರೆ. ಈ ಹಾಡಿಗೆ ಸಂಬಂಧಿಸಿದಂತೆ ಜಯಮಾಲ ಅವರಿಗೆ ಮಹಿಳಾ ಆಯೋಗ ಪತ್ರ ಬರೆದಿತ್ತು. ಸಿನಿಮಾದ ಈ ಹಾಡು ಅಶ್ಲೀಲವಾಗಿದೆ. ಮಹಿಳೆಯರ ಘನತೆಗೆ ಕುತ್ತು ಬರುತ್ತೆ ಎಂದು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು.

ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಿತ್ತು. ಕನ್ನಡ ಮತ್ತು ಹಿಂದಿ ಹಾಡಿನಲ್ಲಿರುವ ಸಾಹಿತ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಹಾಡಿನ ವಿರುದ್ಧ ದೆಹಲಿ ಮೂಲದ ವಕೀಲರೊಬ್ಬರು ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ. ಸೈಬರ್ ಸೆಲ್ ದೂರು ದಾಖಲಾಗಿದೆ. ವಿವಾದ ತಾರಕ್ಕಕ್ಕೆ ಏರುತ್ತಿದ್ದಂತೆ ಹಿಂದಿ ಹಾಡನ್ನು ಯೂಟ್ಯೂಬ್‍ನಿಂದ ಕೆವಿಎನ್ ಪ್ರೊಡಕ್ಷನ್ ತೆಗೆದು ಹಾಕಿದೆ.

Related Posts

Leave a Reply

Your email address will not be published. Required fields are marked *