ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಒಳಗೆ ಇರುವ ಎಸ್‌ಬಿಐ ಬ್ಯಾಂಕ್ ದರೋಡೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬ್ಯಾಂಕ್ ಬೀಗ ಒಡೆದು ಲಕ್ಷಾಂತರ ರೂಪಾಯಿ ದೋಚಿರುವ ಶಂಕೆ ವ್ಯಕ್ತವಾಗಿದೆ.
ಭದ್ರತಾ ಸಿಬ್ಬಂದಿ ಇದ್ದರೂ ರಾತ್ರಿ ಬೀಗ ಒಡೆದು ದರೋಡೆ ಮಾಡಿರುವ ಕಳ್ಳರು ಅಲ್ಲಿದ್ದ ಸಿಸಿ ಕ್ಯಾಮೆರಾವನ್ನು ಪಕ್ಕಕ್ಕೆ ತಿರುಗಿಸಿರುವುದು ಪತ್ತೆಯಾಗಿದೆ. ಇದೇ ಕಚೇರಿ ಆವರಣದಲ್ಲಿ ಮೂರು ದಿನಗಳ ಹಿಂದೆ
ಸಂಸದ ಡಾ ಕೆ ಸುಧಾಕರ್ ಹೆಸರು ಬರೆದಿಟ್ಟು ಬಾಬು ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಸ್ಥಳಕ್ಕೆ ಶ್ವಾನದಳ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.