ರಾಜಸ್ಥಾನದ ಝಲಾವರ್‌ನಲ್ಲಿ ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ.
60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಮತ್ತು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ನೆರವಾಗಿದ್ದಾರೆ.
ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆದಿದ್ದು, ಗಾಯಗೊಂಡ ಮಕ್ಕಳನ್ನು ಆಸಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳ ಅಡಿ ಸಿಲುಕಿರುವ ಮಕ್ಕಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಕ್ರೇನ್‌ಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.
ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರಿ ಮಳೆಯ ಕಾರಣ ಕುಸಿದಿದೆ ಎಂದು ಹೇಳಲಾಗುತ್ತಿದೆ. ದುರಂತದಲ್ಲಿ ಮೃತಪಟ್ಟ ಮಕ್ಕಳಿಗೆ ರಾಜಸ್ಥಾನ ಸಿಎಂ ಭಜನ್‌ಲಾಲ್ ಶರ್ಮಾ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಘಟನೆ ನಿಜಕ್ಕೂ ಹೃದಯವಿದ್ರಾವಕ ಎಂದಿರುವ ಅವರು, ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.