Menu

ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ: ಆರ್‌ ಅಶೋಕ್‌

ಪ್ರಸಕ್ತ ಸಾಲಿನ (2025-26) ಬಜೆಟ್ ನಲ್ಲಿ SCSP/TSP ಅಡಿ ಪರಿಶಿಷ್ಠ ಸಮುದಾಯಗಳಿಗೆ ಒದಗಿಸಿ ಒಟ್ಟು ₹42,017.51 ಕೋಕೋಟಿ ಅನುದಾನದಲ್ಲಿ ₹11,896.84 ಕೋಟಿ ಹಣವನ್ನ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವ ದಲಿತ ವಿರೋಧಿ @INCKarnataka ಸರ್ಕಾರ ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಿಡಿ ಕಾರಿದ್ದಾರೆ.

ಸಾಮಾಜಿಕ ಮಾಧ್ಸ್ವಾಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು,  ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಸುಮ್ಮನೆ ಕಾಟಾಚಾರಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡುವುದಾದರೂ ಯಾತಕ್ಕೆ? ಬಜೆಟ್ ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿ, ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನ ಭ್ರಷ್ಟಾಚಾರದ ಮೂಲಕ ಲೂಟಿ ಹೊಡೆಯುತ್ತೀರಿ, ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಅನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದಿದ್ದಾರೆ.

5 ವರ್ಷ ಸಿಎಲ್ ಪಿ ನಾಯಕರಾಗಿ ಸೇವೆ ಸಲ್ಲಿಸಿದರೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಲಿಲ್ಲ , 8 ವರ್ಷ ಸತತವಾಗಿ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಪರಮೇಶ್ವರ್‌ ಅವರನ್ನು  ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಲಿಲ್ಲ.  7 ಬಾರಿ ಸತತವಾಗಿ ಸಂಸದರಾದರೂ ಕೆ.ಎಚ್‌. ಮುನಿಯಪ್ಪ ಅವರನ್ನು  ಕಾಂಗ್ರೆಸ್ ಪಕ್ಷ ಕನಿಷ್ಠ ಪಕ್ಷ ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯೂ ಮಾಡಲಿಲ್ಲ. ಅಂತೂ ಇಂತೂ ದಲಿತ ವಿರೋಧಿ @INCKarnataka ಪಕ್ಷದಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂದು ಅಶೋಕ್‌ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *