Menu

ಎಸ್‌ಡಿಆರ್‌ಎಫ್‌ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್‌ ಸಿಪಿಐ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಪಿಐ ಶ್ರೀಶೈಲ ಚೌಗಲೆ (37) ಆತ್ಮಹತ್ಯೆ ಮಾಡಿಕೊಂಡವರು.

ಬೆಳಗಾವಿಯ ಚನ್ನಮ್ಮ ನಗರದ ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಚೌಗಲೆ ಪತ್ನಿ ಘಟನೆ ಸಂಬಂಧ ಎಸ್‌ಡಿಆರ್‌ಎಫ್‌ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ರೂಮ್‌ ಬಾಗಿಲು ಮುರಿದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಪ್ರೇಯಸಿ ಮನೆಯಲ್ಲಿ ಹಲ್ಲೆಯಿಂದ ಯುವಕ ಸಾವು

ಪ್ರೇಯಸಿ ಮನೆಗೆ ಹೋಗಿ ಆಕೆಯ ಪತಿಗೆ ಸಿಕ್ಕಿಬಿದ್ದು ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿರುವ ಘಟನೆ ಬ್ಯಾಟರಾಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ಯಾಮಣ್ಣ ಗಾರ್ಡನ್‌ನಲ್ಲಿ ನಡೆದಿದೆ. ರಾಮನಗರದ ಬೀಡಿ ಕಾಲೊನಿ ನಿವಾಸಿ ಮೊಹಮ್ಮದ್ ಖಾಸಿಂ (27) ಕೊಲೆಯಾದ ಯುವಕ.

ಮಾಜಿ ಪ್ರೇಯಸಿ ಮೇ 25 ರಂದು ಕರೆ ಮಾಡಿದ್ದ ಹಿನ್ನಲೆ ಯುವಕ ಆಕೆಯ ಮನೆಗೆ ಹೋಗಿದ್ದಾಗ ಪತಿ ಹಾಗೂ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಆತನ ಮೇಲೆ ಅವರೆಲ್ಲ ಹಲ್ಲೆ ಮಾಡಿದ್ದರು. ಗಾಯಗೊಂಡಿದ್ದ ಖಾಸಿಂ ಮನೆಗೆ ತೆರಳಿ ಮಲಗಿದ್ದ. ಅಸ್ವಸ್ಥಗೊಂಡಿದ್ದ ಆತನಿಗೆ ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮಾಜಿ ಪ್ರೇಯಸಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *