ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದ 123 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಪಡೆದಿವೆ ಎಂದರು.
134 ಕಾಲೇಜುಗಳಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. 13 ಸರ್ಕಾರಿ ಕಾಲೇಜುಗಳು ಈ ಸಾಧನೆ ಮಾಡಿದ್ದು, ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡಿವೆ ಎಂದು ಅವರು ಹೇಳಿದರು.
ಈ ಬಾರಿಯೂ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಎಲ್ಲಾ ವಿಭಾಗಗಳಲ್ಲೂ ಬಾಲಕಿಯರೇ ರ್ಯಾಂಕ್ ಪಡೆದಿದ್ದು, ಒಬ್ಬ ಬಾಲಕ ಕೂಡ ರ್ಯಾಂಕ್ ಪಡೆಯುವಲ್ಲಿ ವಿಫಲರಾಗಿದ್ದಾರೆ. ಬಾಲಕರು ಶೇ.50ರಷ್ಟು ಫಲಿತಾಂಶ ಪಡೆದಿದ್ದರೆ, ಬಾಲಕಿಯರು ಶೇ.,60ಕ್ಕಿಂತ ಅಧಿಕ ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ಮರು ಪರೀಕ್ಷೆ ಬರೆಯುವರಿಗೆ ಉಚಿತ ಅವಕಾಶ ನೀಡಲಾಗಿದೆ. ಈ ಹಿಂದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಬಾಲಕಿಯರಿಗೆ ಶುಲ್ಕ ವಿನಾಯಿತಿ ನೀಡಲಾಗಿತ್ತು. ಈ ಬಾರಿ ಎಲ್ಲರಿಗೂ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ ಎಂದು ಮಧು ಬಂಗಾರಪ್ಪ ಘೋಷಿಸಿದರು.