2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ.
ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ದ್ದರು. ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನ ಶ್ರೇಯಾ – 597 ಅಂಕ ಪಡೆದು ಮೊದಲ ಸ್ಥಾನ, ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ, ವಾಣಿಜ್ಯ ವಿಭಾಗ ದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.
ಉನ್ನತ ಶ್ರೇಣಿ ಯಲ್ಲಿ 1,00,571, ಪ್ರಥಮ ದರ್ಜೆ- 2,78,054 ವಿದ್ಯಾರ್ಥಿಗಳು, ದ್ವೀತಿಯ ದರ್ಜೆ-70969 ವಿದ್ಯಾರ್ಥಿಗಳು, ತೃತೀಯ ದರ್ಜೆ-18845 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕನ್ನಡ ಮಾಧ್ಯಮದ 2,08,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1,17,703 (56.37%) ತೇರ್ಗಡೆಯಾಗಿದ್ದಾರೆ. ಇಂಗ್ಲಿಷ್ ಮಾಧ್ಯಮದ 4,29,011 ಮಂದಿ ಹಾಜರಾಗಿದ್ದು, 3,50,736(81.75%) ವಿದ್ಯಾರ್ಥಿಗಳು ಉತ್ತೀರ್ಣರಾಗಿ ದ್ದಾರೆ.