Menu

ಸೀಮಂತ್​ ಕುಮಾರ್ ಸಿಂಗ್ ಬೆಂಗಳೂರಿನ ನೂತನ ಪೊಲೀಸ್​ ಕಮಿಷನರ್

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತಕ್ಕೆ ಸಂಬಂಧಿಸಿದಂತೆ‌ ರಾಜ್ಯ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬಳಿಕ ಸೀಮಂತ್​ ಕುಮಾರ್ ಸಿಂಗ್ ಅವರನ್ನು ಬೆಂಗಳೂರಿಗೆ ನೂತನ ಪೊಲೀಸ್​ ಕಮಿಷನರ್ ಆಗಿ​ ನೇಮಕ ಮಾಡಿ ಆದೇಶ ಹೊರಡಿಸಿದೆ.

1996 ಬ್ಯಾಚ್ ನ ಐಪಿಎಸ್ ಅಧಿಕಾರಿ, ಬಿಹಾರ ಮೂಲದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಬೆಂಗಳೂರಿಗೆ 39ನೇ ನೂತನ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಸೀಮಂತ್‌ ಕುಮಾರ್‌ ಸಿಂಗ್‌ ಮಂಗಳೂರು ನಗರಕ್ಕೆ ಕಮಿಷನರೇಟ್ ಬಂದ ಬಳಿಕ ಮೊದಲ ಪೊಲೀಸ್ ಕಮಿಷನರ್ ಆಗಿದ್ದರು. 2000ದಿಂದ 2004ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2014ರಲ್ಲಿ ಪಶ್ಚಿಮ ವಲಯದ ಐಜಿಪಿಯಾಗಿದ್ದರು. ಬೆಂಗಳೂರು ಕೇಂದ್ರ ವಿಭಾಗದ ಐಜಿಪಿಯಾಗಿದ್ದ ಸೀಮಂತ್‌ ಕುಮಾರ್‌ ಸಿಂಗ್‌ ಡಿಐಜಿ ಮತ್ತು ನಕ್ಸಲ್ ನಿಗ್ರಹ ಪಡೆ ಕಮಾಂಡರ್ ಆಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Posts

Leave a Reply

Your email address will not be published. Required fields are marked *