ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ನಿಧನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಕಟ ಪೂರ್ವ ಮಾಧ್ಯಮ ಸಲಹೆಗಾರ, ಈ ಭಾನುವಾರ ಪತ್ರಿಕೆ ಸಂಪಾದಕರು, ಮಹದೇವ ಪ್ರಕಾಶ್ ಅವರು ಕೋವಿಡ್ ಗೆ ಬಲಿಯಾಗಿದ್ದು

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರಿಗೆ ಕೊರೊನಾ ಸೋಂಕು ತಗಲಿದ ಹಿನ್ನೆಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ ಎಂದು ಹೇಳಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಅವರು ‘ಈ ಭಾನುವಾರ’ ಪತ್ರಿಕೆ ಸಂಪಾದಕರಾಗಿದ್ದರು. ಅಂಕಣಕಾರರು, ರಾಜಕೀಯ ವಿಶ್ಲೇಷಕರಾಗಿ, ಬರಹಗಾರರಾಗಿ ಗುರುತಿಸಿಕೊಂಡಿದ್ದರು.

,

Leave a Reply

Your email address will not be published. Required fields are marked *