Thursday, February 27, 2025
Menu

ತೆಲುಗು ಹಿರಿಯ ನಟ ಪೋಸಾನಿ ಕೃಷ್ಣ ಮುರಳಿ ಬಂಧನ

posani krishna murali

ತೆಲುಗು ಹಿರಿಯ ನಟ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಪೋಸಾನಿ ಕೃಷ್ಣ ಮುರಳಿ ಅವರನ್ನು ಬುಧವಾರ ರಾತ್ರಿ ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ನಟನ ವಿರುದ್ಧ ಓಬುಲವಾರಿಪಲ್ಲಿ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196, 353(2), ಮತ್ತು 111 ಹಾಗೂ ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಪೊಲೀಸರು ಮುಂದಾಗಿದ್ದಾರೆ.

ಸಮುದಾಯವೊಂದರ ವಿರುದ್ಧ ನಟ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಎರಡು ಗುಂಪುಗಳ ನಡುವೆ ವೈಷಮ್ಯಕ್ಕೂ ಕಾರಣವಾಯಿತು. ಈ ಹಿನ್ನೆಲೆ ಪೋಸಾನಿ ಕೃಷ್ಣ ವಿರುದ್ಧ ಕೇಸ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸಾನಿ ಕೃಷ್ಣ ಅವರು ಕಾನೂನು ಸಂಕಷ್ಟ ಎದುರಿಸುತ್ತಿರುವುದು ಇದೇ ಮೊದಲೇನಲ್ಲ. 2024ರ ನವೆಂಬರ್ನಲ್ಲಿ ಸಿಎಂ ಚಂದ್ರಬಾಬು ನಾಯ್ಡು ವಿರದ್ಧವೂ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆಗಲೂ ತಮ್ಮ ವಿರುದ್ಧ ಕೇಸ್ ದಾಖಲಾಗಿತ್ತು.

Related Posts

Leave a Reply

Your email address will not be published. Required fields are marked *