Menu

ಮದುವೆ ಭರವಸೆಯಿತ್ತು ಸೆಕ್ಸ್‌ ಕೇಸ್‌: ಬಂಧನ ಕಡ್ಡಾಯವಲ್ಲ ಎಂದ ಹೈಕೋರ್ಟ್‌

ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಮಾಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ, ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದು ಏಕೆಂದು ಹೈಕೋರ್ಟ್‌ ಪ್ರಶ್ನಿಸಿದೆ.

ಇಂಥ ಬೆಳವಣಿಗೆ ತಡೆಯುವಲ್ಲಿ ಅಗತ್ಯ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮದುವೆಯಾಗದೆ ವಂಚಿಸಿದ ಆರೋಪ ಸಂಬಂಧ ಅತ್ಯಾಚಾರ ಮತ್ತು ಎಸ್ಸಿಎಸ್ಟಿ ಕಾಯ್ದೆಯಡಿ ಮೂಡಿಗೆರೆ ತಾಲೂಕಿನ ಬಣಕಲ್‌ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದು ಕೋರಿ ಹೊಕ್ಕಳ್ಳಿ ಗ್ರಾಮದ ನಿವಾಸಿ ಎಚ್‌.ಜಿ.ಗಂಗ (29) ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಕ್ರಮಕ್ಕೆ ಆದೇಶಿಸಿದೆ.

ಅರ್ಜಿದಾರ ಪರ ವಕೀಲರು, ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರೂ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೂರು ದಾಖಲಿ ಸುವಲ್ಲೂ ದೂರುದಾರೆ ವಿಳಂಬ ಮಾಡಿದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಯಾಕೆ ಬಂಧಿಸಲಾಗಿದೆ ಎಂದು ನ್ಯಾಯಮೂರ್ತಿ ಕೇಳಿದಾಗ ಅರ್ಜಿದಾರರ ಪರ ವಕೀಲರು, ಆರೋಪಿ ತಲೆಮರೆಸಿಕೊಂಡಿದ್ದರು. ಈಗ ಬಂಧಿಸಲಾಗಿದೆ ಎಂದು ಉತ್ತರಿಸಿದರು.

ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಅವರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಇಂಥ ಪ್ರಕರಣದಲ್ಲಿ ಆರೋಪಿಗಳನ್ನು ಪೊಲೀಸರು ಏಕೆ ಬಂಧಿಸುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ. ಆರೋಪಿಯನ್ನು ಬಂಧಿಸುವುದು ಕಡ್ಡಾಯವೇನಿಲ್ಲ. 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂಬ ಕಾರಣಕ್ಕೆ ಬಂಧಿಸಲಾಗುತ್ತಿದೆ. ಇಂಥ ಪ್ರಕರಣದ ಎಲ್ಲ ಆರೋಪಿಗಳು ಜೈಲಿನೊಳಗಿದ್ದಾರೆ. ಬಂಧನ ಮಾಡಬಾರದು ಎಂದು ಕೋರ್ಟ್‌ ಹೇಳುತ್ತಲೇ ಇದೆ. ಪೊಲೀಸರು ಬಂಧನ ಮಾಡುತ್ತಲೇ ಇದ್ದಾರೆ ಎಂದರು.

ದೂರುದಾರೆಯರೊಂದಿಗೆ ಐದು, ಆರು ವರ್ಷ ಸಂಬಂಧ ಹೊಂದಿರುವ ಪ್ರಕರಣದಲ್ಲೂ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. ಪ್ರಕರಣದಲ್ಲಿ ಆರೋಪಿ, ದೂರುದಾರೆ ಎರಡೂ ವರೆ ವರ್ಷ ಸಂಬಂಧ ಹೊಂದಿದ್ದರು. ಈ ಅಪರಾಧ ಸಂಬಂಧ ಜಾರಿಗೆ ಬಂದಿರುವ ಹೊಸ ನಿಯಮ ಬಿಎನ್‌ಎಸ್‌ ಸೆಕ್ಷನ್‌ 69 ಅನ್ನು ದುರುಪಯೋಗ ಮಾಡಲಾಗುತ್ತಿದೆ. ಇಂತಹ ಬೆಳವಣಿಗೆ ತಡೆ ಯಲು ಏನಾದರೂ ಮಾಡಬೇಕು ಎಂದು ಸರ್ಕಾರಿ ಅಭಿಯೋಜಕರಿಗೆ ನ್ಯಾಯಪೀಠ ಸೂಚಿಸಿತು.

ಸರ್ಕಾರಿ ಅಭಿಯೋಜಕರು, ಅರ್ಜಿದಾರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಬಂಧಿಸಲಾಗಿದೆ. ಹಾಗಾಗಿ ಅರ್ಜಿ ಊರ್ಜಿತವಾಗುವುದಿಲ್ಲ. ಜಾಮೀನು ಕೋರಿ ಹೊಸ ದಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿದಾರರ ಪರ ವಕೀಲರು, ಎಫ್‌ಐಆರ್‌ ರದ್ದು ಕೋರಿ ಈ ಅರ್ಜಿ ಸಲ್ಲಿಸಲಾಗಿದೆ. ಜಾಮೀನು ಅರ್ಜಿ ಸಲ್ಲಿಸಲು ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ. ಅರ್ಜಿದಾರರು ಕೂಡಲೇ ಬಿಡುಗಡೆಯಾಗ ಬೇಕಿದೆ ಎಂದರು. ಅರ್ಜಿ ಹಿಂಪಡೆಯಲು ಅನುಮತಿ ನೀಡಿದ ನ್ಯಾಯಪೀಠ, ಹೊಸದಾಗಿ ಅರ್ಜಿ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು. ಆರೋಪಿ ಜೈಲಿನಿಂದ ಹೊರಬರಬೇಕು ಎಂದು ಗಿ ಹೇಳಿದೆ.

Related Posts

Leave a Reply

Your email address will not be published. Required fields are marked *