Menu

ಭಾರತ- ಪಾಕ್‌ ಯುದ್ಧ ಛಾಯೆ: ಬೆಂಗಳೂರು ಹೆಚ್‌ಎಎಲ್‌ ಸಿಬ್ಬಂದಿಯ ರಜೆ ರದ್ದು, ಹೈ ಅಲರ್ಟ್‌

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಛಾಯೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೈ ಅಲರ್ಟ್ ಘೋಷಿಸ ಲಾಗಿದೆ. ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಹೆಚ್‌ಎಎಲ್ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಯಾಗಿದೆ. 1940ರ ಡಿ. 23ರಂದು ಸ್ಥಾಪನೆಯಾಗಿದ್ದು, ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿದೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಭಾರತವು ಉಗ್ರರ 9 ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಬಳಿಕ ಪಾಕಿಸ್ತಾನವು ಕೂಡ ಭಾರತದ ಗಡಿ ಪ್ರದೇಶಗಳಲ್ಲಿ ಶೆಲ್‌ ದಾಳಿ ನಡೆಸಿ ವಿಫಲಗೊಂಡಿದೆ. ಎರಡೂ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Related Posts

Leave a Reply

Your email address will not be published. Required fields are marked *