Menu

ಶಕ್ತಿ ಯೋಜನೆಗೆ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್‌ಗೆ ಪಾತ್ರವಾಗಿದೆ.

500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಸಾಧಿಸಿರುವ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಮಹಿಳಾ ಪ್ರಯಾಣಿಕರು, ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಸಚಿವ ರಾಮಲಿಂಗಾರೆಡ್ಡಿ ಧನ್ಯವಾದ ಹೇಳಿದ್ದಾರೆ.

ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆ ಬಗ್ಗೆ ಕೆಎಸ್​​​ಆರ್​​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ 2023 ಜೂನ್ 11 ರಂದು ಪ್ರಾರಂಭಿಸಿದ್ದ ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಸಂಸ್ಥೆಗಳಲ್ಲಿ ಉಚಿತವಾಗಿ ಮಹಿಳೆಯರು 500 ಕೋಟಿಗೂ ಹೆಚ್ಚು ಪ್ರಯಾಣಿಸಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸುತ್ತಿದೆ. ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯಎಂದು ಸಚಿವರು ತಿಳಿಸಿದ್ದಾರೆ.

ಶಕ್ತಿ ಯೋಜನೆ ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ​ ಸೇರ್ಪಡೆಗೊಂಡಿದೆ. ಇತ್ತೀಚೆಗೆ ಸಚಿವ ರಾಮಲಿಂಗಾರೆಡ್ಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸರ್ಕಾರದ ಶಕ್ತಿ ಯೋಜನೆಗೆ ದೊರೆತ ಪ್ರಮಾಣಪತ್ರವನ್ನು ತೋರಿಸಿ ಸಂಭ್ರಮಿಸಿದ್ದರು. ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಉಚಿತ ಮಹಿಳಾ ಪ್ರಯಾಣಗಳು ನಡೆದಿದ್ದು, ಈ ಸಾಧನೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​ನಲ್ಲಿ ದಾಖಲಾಗಿ ವಿಶ್ವ ದಾಖಲೆ ಆಗಿದೆ ಎಂದು ಸಚಿವರು ಟ್ವೀಟ್‌ ಮಾಡಿದ್ದರು.

Related Posts

Leave a Reply

Your email address will not be published. Required fields are marked *