Menu

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಶಿವಮೊಗ್ಗ ಕಾನ್‌ಸ್ಟೆಬಲ್‌

ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್‌ ಹೆಡ್‌  ಕಾನ್‌ಸ್ಟೆಬಲ್‌  ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55)  ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ  ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ ಬಂದಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಠಾಣೆಯ ಹಿಂಬದಿಯ ಸೆಲ್‌ಗಳಿರುವ ಜಾಗದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್ ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೇ ನಮಸ್ಕಾರಗಳು. ನಾನು ಇಲಾಖೆಯಲ್ಲಿ 26 ವರ್ಷ ನಿಷ್ಠೆಯಿಂದ ಕೆಲಸ ಮಾಡಿರುತ್ತೇನೆ.  ನಮ್ಮ ಠಾಣೆಯ ನಾಸಿರ್ ಅಹಮದ್ ಹೆಚ್ ಸಿ 131 ನನಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದು ಹಾಗೂ ನನ್ನ ಹತ್ತಿರ ಕಿಂಡಲ್ ಮಾಡಿ ಜಗಳ ಮಾಡಿ ನನ್ನ ಬಗ್ಗೆ ಸಾರ್ವಜನಿಕರಲ್ಲಿ ಅಪಪ್ರಚಾರ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಉಡುಪಿ ಪಿಎಂ ಬಂದೋಬಸ್ತಿಗೆ ಹೋದಾಗ  ನನ್ನ ಬಗ್ಗೆ ಅಲ್ಲಿ ಬಂದಂತಹ ಬೇರೆ ಜಿಲ್ಲೆಯ ಸಿಬ್ಬಂದಿ ಹತ್ತಿರ ಅಪಪ್ರಚಾರ ಮಾಡುತ್ತಿದ್ದು, ಅದನ್ನು ನಾನು ಮನಸ್ಸಿಗೆ ಹಚ್ಚಿಕೊಂಡಂದಿನಿಂದ ನನ್ನ ಆರೋಗ್ಯ ಸರಿ ಇರುವುದಿಲ್ಲ. ನಾನು ನಮ್ಮ ಠಾಣೆಯ ವಿಚಾರವನ್ನು ನಮ್ಮ ಮನೆಯಲ್ಲಿ ಯಾರತ್ರ ಹೇಳಿ ಕೊಳ್ಳುವುದಿಲ್ಲ, ಆದರೆ ಜಗಳ ಮಾಡಿದ ಬಗ್ಗೆ ಆದಿಲ್ ರವರ ಹತ್ತಿರ ಹೇಳಿಕೊಂಡಿರುತ್ತೇನೆ. ನನ್ನ ಬಗ್ಗೆ, ನನ್ನ ಕರ್ತವ್ಯದ ಬಗ್ಗೆ ರಾಧಾ ಮೇಡಂ ಹಾಗೂ ಕವಿತಾ ಮೇಡಂ ಹತ್ತಿರ ಅವನಿಗೆ ಯಾಕೆ ಅಲ್ಲಿ ಹಾಕಿದಿರಿ, ಇಲ್ಲಿ ಹಾಕಿದ್ದೀರಿ ಅಂತ ಕೇಳುತ್ತಾನೆ ಹಾಗೂ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾನೆ .ಆದರಿಂದ ನಾನು ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ನನ್ನ ಸಾವಿಗೆ ನಾಸೀರ್ ಅಹ್ಮದ್ ಹೆಚ್ ಸಿ 131 ಕಾರಣ ಎಂದು ಡೆತ್ ನೋಟ್ ನಲ್ಲಿ ಮೊಹಮದ್‌ ಝಕ್ರಿಯ ಉಲ್ಲೇಖಿಸಿದ್ದಾರೆ

Related Posts

Leave a Reply

Your email address will not be published. Required fields are marked *