ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಶಿವಮೊಗ್ಗ ಜಿಲ್ಲಾಪಂಚಾಯತ್ ಸಿಇಒ ಎನ್.ಹೇಮಂತ್ ಅವರ ಮನೆಯ ಅಡುಗೆ ಕೆಲಸಗಾರ ಸುರೇಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಸುರೇಶ್ ರಜೆ ಮೇಲೆ ಹೋಗಿದ್ದಕ್ಕೆ ನೋಟಿಸ್ ನೀಡಲಾಗಿತ್ತು, ಇದರಿಂದ ನೊಂದು ಸುರೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಮನೆಯಲ್ಲಿದ್ದ ಕಳೆನಾಶಕ ಸೇವಿಸಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು.
ಮೆಗ್ಗಾನ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ಪಡೆದಿದ್ದ ಸುರೇಶ್, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಸುರೇಶ್ ಅಸು ನೀಗಿದ್ದಾರೆ. ಆತ್ಮಹತ್ಯೆ ಸಂಬಂಧ ಈವರೆಗೆ ಪ್ರಕರಣ ದಾಖಲಾಗಿಲ್ಲ.