ಪಶುವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಆರೋಪದಡಿ ಅಮಾನತುಗೊಂಡಿದ್ದ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಆ ಸ್ಥಾನಕ್ಕೆ ಮರುನೇಮಕಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೊರಡಿಸಿದ್ದ ಅಮಾನತು ಆದೇಶ ರದ್ದು ಮಾಡಿದೆ. ಶಿವಶಂಕರಪ್ಪ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು.
ರಾಜ್ಯಪಾಲರು ಸಚಿವಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು. ಶಿವಶಂಕರಪ್ಪ ಸಾಹುಕಾರ್‌ನನನ್ನು ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ, ಶಿಫಾರಸ್ಸು ಮಾಡಿಲ್ಲವೆಂದು ಹೈಕೋರ್ಟ್ ಹೇಳಿದೆ. ಏಳು ದಿನಗಳಲ್ಲಿ ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಸಾಹುಕಾರ್‌ನನ್ನು ಮರುನೇಮಕ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಪುತ್ರಿಯರ ನೇಮಕ ಸಂಬಂಧದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದಿದೆ.
ಶಿವಶಂಕರಪ್ಪ ಸಾಹುಕಾರ್‌ಗೆ ಸಂಬಂಧಿಸಿದ ನಿವಾಸ, ಕಚೇರಿಗಳು ಸೇರಿದಂತೆ ಹಲವೆಡೆ ಇಡಿ ದಾಳಿ ನಡೆಸಿದೆ. ಹಣವನ್ನು ಹವಾಲ ಮೂಲಕ ವರ್ಗಾವಣೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೆಪಿಎಸ್ಸಿ ಕಚೇರಿ ಸೇರಿದಂತೆ ಇತರ ಕೆಲವು ಕಚೇರಿಗಳ ಮೇಲೆ, ಆಯ್ಕೆಯಾದ ಕೆಲವು ಅಭ್ಯರ್ಥಿಗಳ ಮನೆಗಳ ಮೇಲೆ ಇಡಿ ದಾಳಿ ನಡೆದಿದೆ.


