Saturday, September 13, 2025
Menu

ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ನಾಯಕರನ್ನು ಸುಮ್ಮನೆ ಬಿಡಬೇಕೆ?: ಸಿಎಂ ಸಿದ್ದರಾಮಯ್ಯ

siddaramiah

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಲು ಆಗುತ್ತದೆಯೇ? ಪೊಲೀಸರು ನಿಯಮದ ಪ್ರಕಾರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಭಾಷಣ ಮಾಡಿದ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ, ಹಿಂದುಗಳ ವಿರುದ್ಧ ಕ್ರಮ ಎಂದು ಹೇಳಲಾಗುತ್ತದೆಯೇ ಎಂದು ಪ್ರಶ್ನಿಸಿದರು.

ಹಾಸನದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟ ಹಾಗೂ ಕುಟುಂಬಕ್ಕೆ ಸೂಕ್ತ ನೆರವು ನೀಡಲಾಗುವುದು. ಈಗಾಗಲೇ ರಾಜ್ಯ ಸರ್ಕಾರ 5 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರ 2 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದೆ. 10 ಲಕ್ಷ ರೂ. ಪರಿಹಾರ ನೀಡಲು ಸಾಧ್ಯವಿಲ್ಲ ಎಂದರು.

ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ.

ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ.

ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದು, ಮೃತರ ಕುಟುಂಬದವರ ಜೊತೆಗೂ ಮಾತನಾಡುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *