Menu

ನ್ಯಾಯಾಲಯಗಳಿಂದ ಛೀಮಾರಿ ಹಾಕಿಸಿಕೊಳ್ಳುವಲ್ಲಿ ಸಿದ್ದರಾಮಯ್ಯ ಸರ್ಕಾರ ದಾಖಲೆ: ಆರ್‌. ಅಶೋಕ್‌ ಟೀಕೆ

ಸಿಎಂ ಸಿದ್ದರಾಮಯ್ಯನವರೇ , ನ್ಯಾಯಾಲಯಗಳ ಕೈಯಲ್ಲಿ ಛೀಮಾರಿ ಹಾಕಿಸಿಕೊಳ್ಳುವಲ್ಲಿ ನಿಮ್ಮ ಸರ್ಕಾರ ದಾಖಲೆ ಬರೆದಿದೆ. ತಾವು ರಾಜೀನಾಮೆ ನೀಡೋದಕ್ಕೆ ಇನ್ನೆಷ್ಟು ಬಾರಿ ಛೀಮಾರಿ ಹಾಕಿಸಿಕೊಳ್ಳಬೇಕು? ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನಔಷಧಿ ಕೇಂದ್ರಗಳನ್ನು ಮುಚ್ಚಿದ್ದ ರಾಜ್ಯ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನಿರ್ಣಯಕ್ಕೆ ಮಾನ್ಯ ಹೈಕೋರ್ಟ್ ತಡೆ ನೀಡುವ  ಮೂಲಕ ಸರ್ಕಾರಕ್ಕೆ ಮತ್ತೊಮ್ಮೆ ಛೀಮಾರಿ ಹಾಕಿದೆ. ಕಾಂಗ್ರೆಸ್ ಸರ್ಕಾರದ ಅನ್ಯಾಯದ ನಡೆಗಳಿಗೆ ನ್ಯಾಯಾಲಯ ಛೀಮಾರಿ ಹಾಕುತ್ತಿರುವುದು ಇದೆ ಮೊದಲಲ್ಲ ಎಂದು ಪ್ರತಿಪಕ್ಷ  ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿರುವ ಅವರು, ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದ ಮುಸ್ಲಿಂ ಮತಾಂಧರ ಮೇಲಿನ ಕೇಸ್ ವಾಪಸ್ ಪಡೆಯಲು ಹೊಂಚು ಹಾಕಿದ್ದ  ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿ, ಸಿದ್ದರಾಮಯ್ಯ ಸರ್ಕಾರದ ಓಲೈಕೆ ರಾಜಕಾರಣಕ್ಕೆ ನ್ಯಾಯಾಲಯ ಚಡಿ ಏಟು ಕೊಟ್ಟಿತ್ತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಪಶು ಚಿಕಿತ್ಸಾಲಯಕ್ಕೆ ಬೀಗ ಹಾಕಿ ಅದನ್ನ ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸಲು ಹೊಂಚು ಕಾಕಿದ್ದ  ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ  ಹೈಕೋರ್ಟ್ ಛೀಮಾರಿ ಹಾಕಿತ್ತು ಎಂದು ಬರೆದಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನ ಅಕ್ರಮವಾಗಿ ಬಂಧಿಸಿದ್ದು ಅತ್ಯಂತ ತಪ್ಪು ಎಂದು ರಾಜ್ಯ  ಸರ್ಕಾರದ ನಿರಂಕುಶವಾದಿ ಧೋರಣೆಗೆ ಛೀಮಾರಿ ಹಾಕಿದ್ದ ಮಾನ್ಯ ಹೈಕೋರ್ಟ್, ತತಕ್ಷಣವಾಗಿ ಅವರನ್ನು ಬಿಡುಗಡೆಗೊಳಿಸಿ ಎಂದು ಆದೇಶ ನೀಡಿತ್ತು. ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಿಡಿಎ ಸಂಸ್ಥೆಯನ್ನು ಭ್ರಷ್ಟಾಚಾರ, ಅವ್ಯವಸ್ಥೆಯ ಕೂಪವಾಗಿಸಿರುವ ಸರ್ಕಾರವನ್ನು  ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡು ಮಾರುವೇಷದಲ್ಲಿ ಒಮ್ಮೆ ನೋಡಿಕೊಂಡು ಬನ್ನಿ, ಸುಗ್ರೀವಾಜ್ಞೆ ಮೂಲಕ ಬಿಡಿಎ ಸಂಸ್ಥೆ ಮುಚ್ಚುವುದು ಒಳ್ಳೆಯದು ಎಂದು ಛೀಮಾರಿ ಹಾಕಿತ್ತು.

ಸರ್ಕಾರಿ ವಸತಿ ಶಾಲೆಯಲ್ಲಿ ಓದುವ ಬಡ ಕುಟುಂಬದ ಮಕ್ಕಳನ್ನ ಮಲಗುಂಡಿಗಿಳಿಸಿದವರ ಮೇಲೆ ಕ್ರಮ ಕೈಗೊಳ್ಳದ್ದಕ್ಕೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ನ್ಯಾಯಾಲಯ ಛೀಮಾರಿ ಹಾಕಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳ ವಿರುದ್ಧ ಸುಳ್ಳು ಕೇಸು ದಾಖಲಿಸಿ ಕಡೆಗೆ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿತ್ತು. ಮೂಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ನೀಡಿದ್ದ ಅನುಮತಿ ವಿರುದ್ಧ ಕೋರ್ಟ್ ಮೆಟ್ಲಲೇರಿದಾಗಲೂ ಸಿದ್ದರಾಮಯ್ಯ ಸರ್ಕಾರ ಮುಖಭಂಗ ಅನುಭವಿಸಿತ್ತು ಎಂದು ಪೋಸ್ಟ್‌ನಲ್ಲಿ  ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *