Wednesday, October 22, 2025
Menu

ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾಣೆಯ ಸುಳಿವು ನೀಡಿದ್ದಾರೆ.

ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಸತೀಶ್‌ ಜಾರಕಿಹೊಳಿ ಅವರ ಮಾರ್ಗದರ್ಶಕರಾಗಿ ಮುನ್ನಡೆಸಲಿದ್ದಾರೆ. “ನನ್ನ ತಂದೆ ತಮ್ಮ ರಾಜಕೀಯ ಜೀವನದ ಅಂತಿಮ ಹಂತದಲ್ಲಿದ್ದಾರೆ. ಈ ಹಂತದಲ್ಲಿ ಅವರಿಗೆ ಬಲವಾದ ಸಿದ್ಧಾಂತ ಮತ್ತು ಪ್ರಗತಿಪರ ಮನಸ್ಥಿತಿಯನ್ನು ಹೊಂದಿರುವ ನಾಯಕನ ಅಗತ್ಯವಿದೆ, ಅವರಿಗೆ ಅವರು ‘ಮಾರ್ಗದರ್ಶಕ’ (ಮಾರ್ಗದರ್ಶಕ) ಆಗಬಹುದು. ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಎತ್ತಿಹಿಡಿಯಬಲ್ಲ ಮತ್ತು ಪಕ್ಷವನ್ನು ಪರಿಣಾಮಕಾರಿಯಾಗಿ ಮುನ್ನಡೆಸಬಲ್ಲ ವ್ಯಕ್ತಿ. ಅಂತಹ ಸೈದ್ಧಾಂತಿಕ ದೃಢನಿಶ್ಚಯ ಹೊಂದಿರುವ ನಾಯಕನನ್ನು ಕಂಡುಹಿಡಿಯುವುದು ಅಪರೂಪ ಎಂದು ನಾನು ದೃಢವಾಗಿ ನಂಬುತ್ತೇನೆ ಮತ್ತು ಅವರು ಈ ಒಳ್ಳೆಯ ಕೆಲಸವನ್ನು ಮುಂದುವರಿಸಬೇಕೆಂದು ನಾನು ಬಯಸುತ್ತೇನೆ” ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಹೇಳಿದರು.

ನವೆಂಬರ್‌ ಅಥವಾ ಡಿಸೆಂಬರ್ ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಸಿಎಂ ಸ್ಥಾನದ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಪ್ರಬಲ ಆಕಾಂಕ್ಷಿಯಾಗಿದ್ದರೆ, ಇದೀಗ ದಲಿತ ಸಿಎಂ ಬೇಡಿಕೆ ಹೆಚ್ಚಾಗಿದ್ದು, ಸತೀಶ್‌ ಜಾರಕಿಹೊಳಿ ಪೈಪೋಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚೆಗಷ್ಟೇ ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಯಾವುದೇ ಪವರ್‌ ಷೇರಿಂಗ್‌ ಮಾತುಕತೆ ನಡೆದಿಲ್ಲ. ಸಿಎಂ ಆಗಿ ೫ ವರ್ಷ ಪೂರ್ಣಗೊಳಿಸುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿಕೆ ನೀಡಿದ್ದರು. ಆದರೆ ಇದರ ಬೆನ್ನಲ್ಲೇ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಏಕೆಂದರೆ ದೀಪಾವಳಿ ದಿನವೇ ಡಿಕೆ ಶಿವಕುಮಾರ್‌ ಮಂತ್ರಾಲಯಕ್ಕೆ ಭೇಟಿ ನೀಡಿ ಸಿಎಂ ಸ್ಥಾನಕ್ಕಾಗಿ ಸಂಕಲ್ಪ ಮಾಡಿದ್ದರು.

 

Related Posts

Leave a Reply

Your email address will not be published. Required fields are marked *