Thursday, February 26, 2026
Menu

ಅಧಿಕಾರದಲ್ಲಿದ್ದಾಗ ಕೆಲಸ ಮಾಡದ ಬಿಜೆಪಿಯವರಿಂದ ಈಗ ಪ್ರತಿಭಟನೆ: ಸಿಎಂ

ತನ್ನ ಅಧಿಕಾರಾವಧಿಯಲ್ಲಿ  ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸ ಮಾಡದೆ ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಆರೋಗ್ಯ ಇಲಾಖೆಯ ಆಹ್ವಾನಪತ್ರಿಕೆಯಲ್ಲಿ ಉರ್ದು ಭಾಷೆ ಮುದ್ರಿತವಾಗಿದ್ದು, ಈ ಬಗ್ಗೆ ಚರ್ಚೆಗಳೆದ್ದಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತ ವಾಗಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಎರಡು  ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ. ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸಧ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.

Related Posts

Leave a Reply

Your email address will not be published. Required fields are marked *