ಕೈ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡ ನಾಯಕರು!

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಮುಖ 9 ನಿರ್ಣಯಗಳನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡಿಸಿದ್ದಾರೆ.
ವಿಧಾನಮಂಡಲ ಅಧಿವೇಶನಕ್ಕೆ ಮಾಡಿಕೊಂಡಿರುವ ಸಿದ್ಧತೆ ಕುರಿತು ಸಿದ್ದರಾಮಯ್ಯ ಅವರ ಪರವಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ನಾರಾಯಣಸ್ವಾಮಿ ನಿರ್ಣಯವನ್ನು ಮಂಡಿಸಿದರು. ಈ ಬಗ್ಗೆ ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ನಾಯಕರು ಅನುಮೋದಿಸಿದರು.
ಕೈಗೊಳ್ಳಲಾದ ನಿರ್ಣಯಗಳು:
1. ಸಭೆಯಲ್ಲಿ ಚರ್ಚಿಸುವ ಮಹತ್ವದ ವಿಷಯಗಳು: ನಿಯಮ 60ರ ಅಡಿಯಲ್ಲಿ ವಿವಿಧ ವಿಷಯಗಳ ಬಗ್ಗೆ ನಿಲುವಳಿ ಸೂಚನೆಗಳನ್ನು ಮಂಡಿಸುವುದು.
ಪ್ರವಾಹ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಕ್ರಮಗಳು.
ಕೊರೊನಾ ಸೋಂಕಿನಿಂದ ಉಂಟಾಗುವ ಪರಿಣಾಮ ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ.
ಡಿ.ಜೆ. ಹಳ್ಳಿ ಘಟನೆ, ಡ್ರಗ್ಸ್ ಹಗರಣ ಸೇರಿದಂತೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ.
ಆರ್ಥಿಕತೆ ಕುಸಿತ, ಉದ್ಯೋಗ ನಷ್ಟ, ಖಾಸಗಿ ಉದ್ದಿಮೆಗಳು ಮತ್ತು ಸಂಸ್ಥೆಗಳು ಮುಚ್ಚಿರುವುದರಿಂದ ರಾಜ್ಯದ ಮೇಲೆ ಉಂಟಾಗುತ್ತಿರುವ ಪರಿಣಾಮಗಳು.
2. ವಿಧೇಯಕಗಳು ಮತ್ತು ಅಧ್ಯಾದೇಶಗಳು:
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಅಧ್ಯಾದೇಶ-2020
ಎಪಿಎಂಸಿ ಕಾಯ್ದೆ ತಿದ್ದುಪಡಿ ಅಧ್ಯಾದೇಶ-2020
ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ
3. ಅಧಿವೇಶನದ ಅವಧಿ ಕಡಿತ ಕುರಿತು ಚರ್ಚೆ ಸೀಮಿತ ಅವಧಿಯ ಸದುಪಯೋಗ ಕುರಿತು ಚರ್ಚೆ
4. ನಿಯಮ 69 ಮತ್ತು 73 ರ ಅಡಿಯಲ್ಲಿ ಚರ್ಚಿಸಬೇಕಾಗುವ ಸಾರ್ವಜನಿಕ ಮಹತ್ವದ ವಿಷಯಗಳ ಬಗ್ಗೆ.
5. ವಿಧೇಯಕ ಹಾಗೂ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಭಾಗವಹಿಸಿದ ಸದಸ್ಯರ ಪಟ್ಟಿ ಸಿದ್ಧಪಡಿಸುವ ಕುರಿತು.
6. ಶಾಸಕರ ಸಲಹೆ ಮತ್ತು ಅನಿಸಿಕೆಗಳು
7. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನುಡಿಗಳು
8. ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರ ನುಡಿಗಳು
9. ಅಧ್ಯಕ್ಷರ ಅನುಮತಿ ಮೇರೆಗೆ ಇತರೆ ವಿಷಯಗಳ ಚರ್ಚೆಗೆ ತೀರ್ಮಾನ.
ಇನ್ನು ಇದೇ ವೇಳೆ ವಿವಿಧ ರಾಜ್ಯಗಳ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಹೆಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್ ಹಾಗೂ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕವಾಗಿರುವ ಕೃಷ್ಣ ಬೈರೇಗೌಡರಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು.

Leave a Reply

Your email address will not be published. Required fields are marked *