ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ: ಬಿಜೆಪಿ ಪಕ್ಷ ಸಂಘಟನಾತ್ಮಕ ಸಭೆ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್

ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ತಯಾರಿ ಅಂಗವಾಗಿ ಇಂದು ತಾವರೆಕೆರೆ,ಗೊಲ್ಲರಹಟ್ಟಿ,ಗಜ್ಜಿರಹಳ್ಳಿ,ಮೊಸರು ಕುಂಟೆಯ ಬೂತ ಮಟ್ಟದ ಕಾರ್ಯಕರ್ತರ ಹಾಗೂ ಸಂಘಟನಾತ್ಮಕ ಸಭೆಯನ್ನು  ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ನಡೆಸಿದರು.
ಶಿರಾ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವದ್ಧಿಗಾಗಿ ಹಾಗೂ ನೆನಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ನಮ್ಮ ಪಕ್ಷ ತರುತ್ತದೆ. ಹೀಗಾಗಿ ಈ ಭಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು  ಮನವಿ  ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಸುರೇಶಗೌಡ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *