Menu

ಸುಜಾತ ಭಟ್‌ಗೆ ಎಸ್‌ಐಟಿ ಭದ್ರತೆ ಒದಗಿಸಬೇಕು, ಮಹಿಳೆಯರ ಘನತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಮಹಿಳಾ ಆಯೋಗ

ಮಹಿಳೆಯರ ಘನತೆಗೆ ಯಾರೇ ಧಕ್ಕೆ ತಂದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಎಚ್ಚರಿಕೆ ನೀಡಿದ್ದಾರೆ. ಅನನ್ಯಾ ಭಟ್ ಅವರ ತಾಯಿ ‘ಪದೇ ಪದೆ ಪ್ರಶ್ನೆ ಮಾಡಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ’ ಎಂದು ಹೇಳುತ್ತಿದ್ದಾರೆ. ಆದ್ದರಿಂದ ಅವರಿಗೂ ಎಸ್‌ಐಟಿ ಭದ್ರತೆ ಒದಗಿಸಬೇಕು ಎಂಬುದಾಗಿ ನಾನು ಶಿಫಾರಸು ಮಾಡಿದ್ದೇನೆ ಎಂದು ಹೇಳಿದ್ದಾರೆ.

ಅವರು ಇತ್ತೀಚಿನ ಬೆಳವಣಿಗೆಗಳ ಕುರಿತು ಮಹಿಳಾ ಹೋರಾಟಗಾರರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಅದರಲ್ಲಿ “ಧರ್ಮಸ್ಥಳದ ಸೌಜನ್ಯ, ವೇದವಲ್ಲಿ ಅವರನ್ನೆಲ್ಲಾ ಯಾರು ಕೊಂದರು ಎಂಬ ಅಂಶವನ್ನು ಒಳಗೊಂಡ ಪತ್ರವನ್ನು ನೀಡಿದ್ದಾರೆ. ಈ ಕುರಿತು ಈಗಾಗಲೇ ಎಸ್‌ಐಟಿ ತನಿಖೆ ಪ್ರಾರಂಭವಾಗಿದೆ. “ಯಾರು ಸಂತ್ರಸ್ತೆಯರಿದ್ದರೂ ಅವರಿಗೆ ಬೆಂಬಲ ನೀಡುವುದು ನಮ್ಮ ಕರ್ತವ್ಯ. ಪ್ರಕರಣ ಈಗಾಗಲೇ ಎಸ್‌ಐಟಿ ತನಿಖೆಯಲ್ಲಿದೆ. ಯಾರಿಗೂ ಯಾವುದೇ ರೀತಿಯ ತೊಂದರೆ ಆಗದಂತೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ತನಿಖೆಯಲ್ಲಿ ಸತ್ಯ ಹೊರಬರುವುದನ್ನು ಕಾಯಬೇಕು ಎಂದು ನಾಗಲಕ್ಷ್ಮಿ ಚೌಧರಿ ಸ್ಪಷ್ಟಪಡಿಸಿದ್ದಾರೆ.

ಗಿರೀಶ್ ಮಟ್ಟಣ್ಣನವರ್ ವಿರುದ್ಧ ಗಂಭೀರ ಆರೋಪ ಹೊರಬಿದ್ದಿದ್ದು, “ಅವರು ಸುಳ್ಳು ಹೇಳಿಕೆ ನೀಡಿ ಮಹಿಳೆಯರ ಮಾನಕ್ಕೆ ಧಕ್ಕೆ ತಂದಿದ್ದಾರೆ. ಮಹಿಳೆಯರ ಮಾನಸಿಕ ಸ್ಥಿತಿ ಹಾಗೂ ಅವರ ಚಾರಿತ್ರ್ಯ ವಧೆಗೆ ಕಾರಣವಾದರೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಾನು ಸೂಚನೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಭಾಸ್ಕರ್ ಪ್ರಸಾದ್ ಎಂಬವರು ವಿಜಯಲಕ್ಷ್ಮಿ ಪರವಾಗಿ ದೂರು ನೀಡಿದ್ದಾರೆ. ವಿಜಯಲಕ್ಷ್ಮಿ ಹಾಗೂ ರಮ್ಯಾ ಅಷ್ಟೇ ಅಲ್ಲ, ಯಾವುದೇ ಹೆಣ್ಣು ಮಕ್ಕಳ ಘನತೆಗೆ ಚ್ಯುತಿ ಉಂಟಾದರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಅಸಂಬದ್ಧವಾಗಿ ಪ್ರತಿಕ್ರಿಯಿಸುವವರಿಗೆ ಎಚ್ಚರಿಕೆ ನೀಡಿದ ಅವರು, ಆರೋಗ್ಯಕರ ಚರ್ಚೆ ನಡೆಸಿದರೆ ಸ್ವಾಗತ. ಮಹಿಳೆಯರ ಘನತೆಗೆ ಧಕ್ಕೆ ತಂದರೆ ಅದು ಅಪರಾಧ. ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಎಚ್ಚರಿಸಿದ್ದಾರೆ.

Related Posts

Leave a Reply

Your email address will not be published. Required fields are marked *