ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಆರು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಭಾರೀ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿದೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಘಟನೆಯಲ್ಲಿ ಹಲವು ಭಕ್ತರು ಗಾಯಗೊಂಡಿದ್ದು, ಕೆಲವರು ಅಸ್ವಸ್ಥಗೊಂಡಿದ್ದಾರೆ. ಗಾಯಾಳು ಭಕ್ತರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗರ್ವಾಲ್ ವಿಭಾಗದ ಆಯುಕ್ತ ವಿನಯ್ ಶಂಕರ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ದುರಂತಕ್ಕೆ ಖಚಿತವಾದ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ, ಪೊಲೀಸರು ತನಿಖೆ ನಡೆಸಿದ ಬಳಿಕ ಎಲ್ಲ ಮಾಹಿತಿಗಳು ಲಭ್ಯವಾಗಲಿವೆ.