ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು. ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಗಾಯಗೊಂಡವರು.
ಶಾಲೆ ರಜೆ ಇರುವ ಹಿನ್ನಲೆ ಸಂಬಂಧಿಕರೆಲ್ಲಾ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್ನಲ್ಲಿದ್ದರು.
ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಚಾಲಕನ ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ಕಾರು ಹರಿಯಾಣ ಮೂಲದ್ದು ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.