ಚಿಕ್ಕಬಳ್ಳಾಪುರ ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸಂತ್ರಸ್ತ ಬಾಲಕಿಯ ತಾಯಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಹಪ್ಯೂಸ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿಯು ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ತಂದೆ, ಮೌಲ್ವಿಯ ಆಶ್ರಯಕ್ಕೆ ಮಸೀದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ. ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಮಹಪ್ಯೂಸ್ ಉತ್ತರ ಪ್ರದೇಶ ಮೂಲದವ, 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ವಾಸ್ತವ್ಯ ಹೂಡಿದ್ದ. ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿ ದ್ದಾನೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಮಸೀದಿಯ ಮೌಲ್ವಿ ಸುಹೇಬ್ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೌಲ್ವಿಯ ಆಶ್ರಯಕ್ಕೆಂದು ಪಡೆದ ಕೊಠಡಿಯನ್ನು ತಂದೆಗೆ ಯಾಕೆ ನೀಡಿದ್ದು ಪ್ರಶ್ನಿಸಿದ್ದಾರೆ. ಬಾಲಕಿಯ ತಾಯಿ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ.