12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ, 2.67 ಕೋಟಿ ಹಣವನ್ನು ಡಿಆರ್‌ಐ ಅಧಿಕಾರಿಗಳು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ವಿದೇಶದಿಂದ ದೆಹಲಿ ಮಾರ್ಗವಾಗಿ 4.18 ಕೆಜಿ ತೂಕದ ಚಿನ್ನವನ್ನು ಕಳ್ಳಸಾಗಣೆ ಮಾಡುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದ ರನ್ಯಾ ಹಾಗೂ ಬೆಂಗಾವಲಿಗೆ ಇದ್ದ ಪೊಲೀಸರನ್ನು ಡಿಆರ್ ಒ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಡಿಆರ್ ಒ ಪೊಲೀಸರು ತಮ್ಮ ವಶಕ್ಕೆ ಪಡೆಯಲು ಯಾವುದೇ ಮನವಿ ಸಲ್ಲಿಸದ ಹಿನ್ನೆಲೆಯಲ್ಲಿ ನ್ಯಾಯಾಲಯ ಮಾರ್ಚ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು.
ಐಪಿಎಸ್ ಅಧಿಕಾರಿಯೊಬ್ಬರ ಮಲಮಗಳು ಆಗಿರುವ ರನ್ಯಾ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಚಿತ್ರದಲ್ಲಿ ನಾಯಕಿ ನಟಿಯಾಗಿ ಅಭಿನಯಿಸಿದ್ದರು. ಮಂಗಳವಾರ ವಿದೇಶದಿಂದ ಬರುವಾಗ ಅಧಿಕಾರಿಗಳು ತಪಾಸಣೆ ಮಾಡುವಾಗ 14.8 ಕೆಜಿ ತೂಕದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದುದು ಪತ್ತೆಯಾಗಿದೆ.