ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಗುರುವಾರ ಬೆಳಿಗ್ಗೆ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಯ ಉಜಿರೆಯ ಮನೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಸಂಜೆ ಬ್ರಹ್ಮಾವರ ಸಂಚಾರಿ ಪೀಠದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ಈ ವೇಳೆ ಮಹೇಶ್ ತಿಮರೋಡಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.