ರಜೆಯಲ್ಲಿ ತವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಪೊನ್ನಪ್ಪಸಂತೆಗೆ ಬಂದಿದ್ದ ಯೋಧ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪೊನ್ನಪ್ಪಸಂತೆಯ ಬಿದ್ದಮಾಡ ಬಿಪಿನ್ ಭೀಮಯ್ಯ (36) ಮೃತ ಯೋಧ.
ರಜೆಯಲ್ಲಿ ಮನೆಗೆ ಬಂದಿದ್ದ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ. ಮದುವೆ ಸಮಾರಂಭಕ್ಕೆ ಹೋಗಿ ವಾಪಸಾಗುತ್ತಿ ದ್ದಾಗ ಕಾರು ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು ಬಿಪಿನ್ ಭೀಮಯ್ಯ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ಮೃತಪಟ್ಟಿದ್ದರು.