Saturday, October 17, 2026
Menu

ಪೊನ್ನಂಪೇಟೆಯಲ್ಲಿ ಪತ್ನಿಗೆ ಗುಂಡು ಹಾರಿಸಿದ ಯೋಧ

ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿನು ಕಾರ್ಯಪ್ಪ ಗುಂಡಿಕ್ಕಿದ ಆರೋಪಿ, ಆತನ ಪತ್ನಿ ದೀಪಿಕಾ ದೇಚಮ್ಮ (32) ಗುಂಡೇಟಿನಿಂದ ಗಾಯಗೊಂಡಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ, ಮೈಸೂರಿನ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುಂಡು ಹಾರಿಸಿದ ಆರೋಪಿ ಯೋಧ ಕೃತ್ಯದ ಬಳಿಕ ಸ್ಥಳದಿಂದ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರ ನಡುವೆ ಕೌಟುಂಬಿಕ ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು. ಹೀಗೆ ಜಗಳ ನಡೆದಾಗ ಕೋಪಗೊಂಡ ವಿನು ಕಾರ್ಯಪ್ಪ ತನ್ನ ಬಂದೂಕಿನಿಂದ ದೀಪಿಕಾ ಅವರಿಗೆ ಗುಂಡು ಹಾರಿಸಿದ್ದಾನೆ.

ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವಿನು ಕಾರ್ಯಪ್ಪನ ಪತ್ತೆಗಾಗಿ ಶೋಧ ಆರಂಭಿಸಿದ್ದಾರೆ.

Related Posts

Leave a Reply

Your email address will not be published. Required fields are marked *