Menu

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆ ಶಿವಕುಮಾರ್

“ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಬಗ್ಗೆ ಕೇಳಿದಾಗ, “ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರು ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ.‌ ರಾಜಕೀಯದವರು, ಮಾಧ್ಯಮಗಳು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು – ಹೀಗೇ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ” ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *