ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್ ಗನ್‌ನಿಂದ ಫೈರಿಂಗ್ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ.
ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ.
ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯವರೆಲ್ಲ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದ, ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.
ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಬಗ್ಗೆ ಪೊಲೀಸ್ ತನಿಖೆಯ ಬಳಿಕ ಮಾಹಿತಿ ಲಭಿಸಬೇಕಿದೆ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.