ಹಣಕ್ಕಾಗಿ ಹೆತ್ತ ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಮಾರ್ಚ್ 8ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿರದಳ್ಳಿ ತಾಂಡದ ನಿವಾಸಿ ಚೆನ್ನಾರೆಡ್ಡಿ ರಾಠೋಡ ಮಗ ಶೇಖರ್ ರಾಥೋಡನಿಂದಲೇ ಕೊಲೆಯಾದ ದುರ್ದೈವಿ.
ಕುಡಿದ ಮತ್ತಿನಲ್ಲಿ ಮಲಗಿದ್ದ ತಂದೆಯನ್ನು ಚಾಕುವಿನಿಂದ ಬರ್ಬರವಾಗಿ ಕೊಲೆ ಮಾಡಿದ ಪಾಪಿ ಮಗ ಶೇಖರ್ ನಂತರ ಶವವನ್ನು ನೇಣುಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಕ್ಕಪಕ್ಕದವರನ್ನು ಕರೆದು ಗೋಳಿಟ್ಟಿದ್ದ. ಅಲ್ಲದೇ ತರಾತುರಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದ.
ಅಜ್ಜಿ ತಾರಾಬಾಯಿ ಜೊತೆ ಪೊಲೀಸ್ ಠಾಣೆಗೆ ಆಗಮಿಸಿದ್ದ ಶೇಖರ್ ರಾಠೋಡ್ ದೂರು ಕೊಟ್ಟಿದ್ದ. ಈ ವೇಳೆ ಅಜ್ಜಿ ಮಗನ ಸಾವಿಗೆ ಮೊಮ್ಮಗನೇ ಕಾರಣ ಎಂದು ಆರೋಪಿಸಿದ್ದಾರೆ. ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ.
ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೇಖರ್ ರಾಥೋಡ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.