ಉತ್ತರ ಪ್ರದೇಶದ ಜೌನ್‌ಪುರದಲ್ಲಿ ವ್ಯಕ್ತಿಯೊಬ್ಬ ತಂದೆ-ತಾಯಿಯನ್ನು ಹೊಡೆದು ಕೊಂದು ಬಳಿಕ ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಘಟನೆ ನಡೆದಿದೆ. ಎಂಜಿನಿಯರ್ ಅಂಬೇಶ್ ಕೊಲೆ ಆರೋಪಿ. ತಂದೆ ಶ್ಯಾಮ್ ಬಹದ್ದೂರ್ (62), ತಾಯಿ ಬಬಿತಾ (60)ಕೊಲೆಯಾದವರು. ಕೊಲೆಗಾರ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಮಾಡಿದ ನಂತರ ದೇಹಗಳನ್ನು ಗರಗಸದಿಂದ ಕತ್ತರಿಸಿ ನದಿಗೆ ಎಸೆದಿದ್ದ. ತಂದೆಯ ಹಠಮಾರಿತನ ಹಾಗೂ ಮಗನ ಕೋಪದಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಅಂಬೇಶ್ ಮುಸ್ಲಿಂ ಹೆಣ್ಣನ್ನು ಮದುವೆಯಾಗಿದ್ದು, ಇದೇ ವಿಚಾರವಾಗಿ ಅಪ್ಪ-ಅಮ್ಮನ ಜೊತೆ ಜಗಳವಾಗಿತ್ತು. ಮುಸ್ಲಿಂ ಹೆಣ್ಣನ್ನು ಮನೆಗೆ ಸೇರಿಸಿಕೊಳ್ಳಲು ತಂದೆ ತಾಯಿ ಒಪ್ಪಿರಲಿಲ್ಲ.
ಕೊನೆಗೆ ಅಂಬೇಶ್ ಮತ್ತು ಆತನ ಪತ್ನಿ ಅಂತಿಮವಾಗಿ ಬೇರೆಯಾಗಲು ನಿರ್ಧರಿಸಿದರು. ಪತ್ನಿಗೆ ಜೀವನಾಂಶ ಪಾವತಿಸಲು ಆತನಿಗೆ ಹಣ ಬೇಕಿದ್ದು, ತಂದೆ ಬಳಿ ಕೇಳಿದ್ದ. ಆದರೆ ತಂದೆ ಹಣ ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡು ತಂದೆ ಜೊತೆ ತಾಯಿಯನ್ನೂ ಕೊಲೆ ಮಾಡಿದ್ದಾನೆ.
ತಂದೆ-ತಾಯಿ ಮತ್ತು ಸಹೋದರ ಕಾಣೆಯಾಗಿದ್ದಾರೆಂದು ಡಿ.13 ರಂದು ಅಂಬೇಶ್ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಪ್ಪ-ಅಮ್ಮ ನನ್ನ ಜೊತೆ ಜಗಳವಾಡಿಕೊಂಡು ಮನೆಬಿಟ್ಟು ಹೋಗಿದ್ದಾರೆ. ಅವರನ್ನು ಹುಡುಕುತ್ತಿದ್ದೇನೆ ಎಂದು ಅಂಬೇಶ್ ನನಗೆ ಕರೆ ಮಾಡಿ ತಿಳಿಸಿದ್ದ. ಮತ್ತೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಬಂದಿದೆ ಎಂದು ಸಹೋದರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನುಮಾನಗೊಂಡು ಪೊಲೀಸರು ಅಂಬೇಶ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕೊಲೆ ವಿಚಾರ ಬಹಿರಂಗವಾಗಿದೆ.
ನಿವೃತ್ತ ರೈಲ್ವೆ ಉದ್ಯೋಗಿ ಶ್ಯಾಮ್ ಬಹದ್ದೂರ್ ಮತ್ತು ಅವರ ಪತ್ನಿ ಬಬಿತಾಗೆ ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ. ಮಗ ಅಂಬೇಶ್ ಐದು ವರ್ಷಗಳ ಹಿಂದೆ ಮುಸ್ಲಿಂ ಮಹಿಳೆಯನ್ನು ವಿವಾಹವಾಗಿದ್ದ. ಇವರಿಗೆ ಇಬ್ಬರು ಮಕ್ಕಳಿದ್ದರು. ಅಂಬೇಶ್ ಪತ್ನಿಯಿಂದ ದೂರಾಗಲು ನಿರ್ಧರಿಸಿದ್ದು, ಪತ್ನಿ ಜೀವನಾಂಶ ಕೇಳಿದ್ದಳು. ಹಣದ ವಿಚಾರಕ್ಕೆ ತಂದೆ-ತಾಯಿ ಜೊತೆ ಜಗಳ ಮಾಡಿಕೊಂಡು ಅಂಬೇಶ್ ಹತ್ಯೆ ಮಾಡಿದ್ದಾನೆ.


