ಶಿವಮೊಗ್ಗ: ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ (57) ಹಾಗೂ ಪುತ್ರ ಆಕಾಶ್ (32) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಆತ್ಮಹತ್ಯೆಗೆ ಶರಣಾಗಿದ್ದು ನೋಡಿ ಮಗನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೂರು ವರ್ಷದ ಹಿಂದೆ ಮೊದಲ ಪತ್ನಿ ನವ್ಯಾ ಆತ್ಮಹತ್ಯೆಗೆ ಶರಣಾಗಿದ್ದರು. 6 ತಿಂಗಳ ಹಿಂದೆಯಷ್ಟೇ 2ನೇ ಮದುವೆಯನ್ನು ಆಕಾಶ್ ಆಗಿದ್ದರು. 2ನೇ ಹೆಂಡತಿ ಮನೆಯಲ್ಲಿದ್ದಾಗ ತಾಯಿ, ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಡಾ. ಜಯಶ್ರೀ ಶಿವಮೊಗ್ಗದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆ ಹೊಂದಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿವಮೊಗ್ಗದ ವಿನೋಬಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


