Menu

ದೆಹಲಿ ಹೈಕೋರ್ಟ್‌ ಆದೇಶದನ್ವಯ ಸೋನಂ ವಾಂಗ್ಚುಕ್‌ ಆಸ್ಪತ್ರೆಗೆ ಶಿಫ್ಟ್‌

ನೀಟ್‌-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೨೧ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್‌ ಜನತಾ ಪಕ್ಷದ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಾಂಗ್ಚುಕ್‌ ಕಳೆದ 2೧ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸೋನಮ್ ವಾಂಗ್ಚುಕ್ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಹೈಕೋರ್ಟ್ ಆದೇಶ ಪ್ರಕಾರ ಮತ್ತು ತಜ್ಞರ ಸಲಹೆಯನ್ವಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನಾಕಾರರು ಶಾಂತಿಯುತವಾಗಿ ಜಂತರ್ ಮಂತರ್ ತೊರೆಯುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ವಾಂಗ್ಚುಕ್‌ ಅವರ ಆರೋಗ್ಯವನ್ನು ಕಾಪಾಡಿ ಉಳಿಸಿಕೊಳ್ಳುವಂತೆ ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಅವರ ಜೀವವನ್ನು ಉಳಿಸಲು ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಯಾವುದೇ ನಾಗರಿಕರ ಜೀವವು ಅಮೂಲ್ಯ. ಜೀವ ಉಳಿಸಲು ಅಧಿಕಾರಿಗಳು ಎಲ್ಲಾ ಪ್ರಯತ್ನಗಳನ್ನು ಮಾಡಬೇಕು ಎಂದು ನ್ಯಾಯಾಲಯ ಆದೇಶಿಸಿತ್ತು.

59 ವರ್ಷದ ವಾಂಗ್ಚುಕ್ ಉಪವಾಸ ಮುರಿಯದಿದ್ದರೆ ಮೃತಪಡುವ ಸಾಧ್ಯತೆ ಇದೆ ಎಂದು ಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆಯಾಗಿತ್ತು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿದೆ.

Related Posts

Leave a Reply

Your email address will not be published. Required fields are marked *