ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮಿ ಪಿತ್ರೋಡಾ ಹೆಸರನ್ನು ಉಲ್ಲೇಖಿಸಿದೆ.
ಮಂಗಳವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿಶಾಲ್ ಗೋಂಘೆ ಚಾರ್ಜ್ ಶೀಟ್ ಸ್ವೀಕರಿಸಿದ್ದು, ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿದ್ದಾರೆ.
ಪ್ರಕರಣದಲ್ಲಿ ಇದೇ ಮೊದಲ ಬಾರಿ ಚಾರ್ಜ್ ಶೀಟ್ ನಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹೆಸರು ಪ್ರಸ್ತಾಪಿಸಲಾಗಿದೆ.
ಚಾರ್ಜ್ ಶೀಟ್ ನಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವುದಕ್ಕೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ತನಿಖಾ ತಂಡಗಳ ಮೇಲೆ ಪ್ರಧಾನಿ ಮೋದಿ ಪ್ರಭಾವ ಬೀರುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಹೇಳಿಕೆ ನೀಡಿದ್ದಾರೆ.