ಉತ್ತರ ಪ್ರದೇಶದ ಘಾಜಿಯಾಬಾದ್ನ ಬಾಗ್‌ಪತ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿಯೊಬ್ಬರನ್ನು ಅವರ ಮಕ್ಕಳೇ ಗುಂಡಿಕ್ಕಿ ಕೊಲೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ನಡೆದು ಐದು ದಿನಗಳ ನಂತರ ಹೊರ ಬಂದಿದೆ.
ಆಸ್ತಿಗಾಗಿ ಮಕ್ಕಳು ಈ ಕೊಲೆ ಮಾಡಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಡಿಸೆಂಬರ್ 26 ರಂದು ಐಎಎಫ್ ನಿವೃತ್ತ ಸಿಬ್ಬಂದಿ ಯೋಗೇಶ್ ಕುಮಾರ್ ತಮ್ಮ ಮನೆಗೆ ಬರುತ್ತಿರಬೇಕಾದರೆ ಗುಂಡಿಕ್ಕಿ ಕೊಲೆ ಮಾಡಿಸಲಾಗಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ.
ಯೋಗೇಶ್ ಕುಮಾರ್ ಪುತ್ರರು ಕೊಲೆಗೆ ಸುಪಾರಿ ನೀಡಿದ್ದು, ಯೋಗೇಶ್ ಕುಮಾರ್ ಮನೆಗೆ ಬರುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ, ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿದ್ದರು. ನಂತರ ಅವರನ್ನು ಮಕ್ಕಳೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ವಿಶೇಷ ತಂಡ ರಚಿಸಿದ್ದಾರೆ ಎಂದು ಲೋಣಿಯ ಎಸಿಪಿ ಸಿದ್ಧಾರ್ಥ ಗೌತಮ್ ತಿಳಿಸಿದ್ದಾರೆ.
ಯೋಗೇಶ್ ತನ್ನ ಪುತ್ರರಾದ ನಿತೇಶ್ ಮತ್ತು ಗುಡ್ಡು ಮನೆಯನ್ನು ಮಾರಾಟ ಮಾಡಲು ಒತ್ತಾಯಿಸುತ್ತಿದ್ದನೆಂದು ಈ ಹಿಂದೆ ಪೊಲೀಸರಿಗೆ ದೂರು ನೀಡಿರರುವ ವಿಚಾರ ಬಹಿರಂಗವಾಗಿದೆ. ಪುತ್ರಉ ಪಕ್ಕದ ಮನೆಯ ಅರವಿಂದ್ ಕುಮಾರ್ (32) ಎಂಬಾತಗೆ ತಂದೆಯನ್ನು ಕೊಲೆ ಮಾಡಲು 5 ಲಕ್ಷ ರೂ. ನೀಡಿದ್ದು, ಅರವಿಂದ್ ಕುಮಾರ್ ಸೋದರ ಮಾವ ನವೀನ್ ಜೊತೆಗೆ ಸೇರಿ ಈ ಕೃತ್ಯ ಎಸಗಿರುವುದಾಗಿ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾರೆ.
ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿ ,ಆರೋಪಿಗಳಿಂದ 315 ಬೋರ್ ಕಂಟ್ರಿ ನಿರ್ಮಿತ ಪಿಸ್ತೂಲ್, ಲೈವ್ ಕಾರ್ಟ್ರಿಡ್ಜ್‌ಗಳು, ಬಳಸಿದ ಕಾರ್ಟ್ರಿಡ್ಜ್‌ಗಳು, ಕೊಲೆಗೆ ಬಳಸಲಾದ ಕಬ್ಬಿಣದ ಪೈಪ್ ಮತ್ತು ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ.


