Menu

ಸಂಕ್ರಾಂತಿ ಸಂಭ್ರಮಕ್ಕೆ ಬೆಂಗಳೂರು ಚೆನ್ನೈ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳು

ಮಕರ ಸಂಕ್ರಾಂತಿಗೆ ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಾಗುವುದು ಎಂದು ನೈಋತ್ಯ ರೈಲ್ವೆ ಘೋಷಿಸಿದೆ. ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ.

ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಮಾಹಿತಿ ಹಂಚಿಕೊಂಡಿರುವ ನೈಋತ್ಯ ರೈಲ್ವೆ, ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಮತ್ತಿತರ ವಿವರಗಳನ್ನು ಪ್ರಕಟಿಸಿದೆ.

ರೈಲು ಸಂಖ್ಯೆ 07319 / 07320 ವಿಶೇಷ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್​ಗೆ ಹಾಗೂ ಅಲ್ಲಿಂದ ಕೆಎಸ್‌ಆರ್ ಬೆಂಗಳೂರಿಗೆ ಸಂಚರಿಸಲಿದೆ.

ರೈಲು ಸಂಖ್ಯೆ 07319 ಕೆಎಸ್‌ಆರ್ ಬೆಂಗಳೂರು -ಡಾ.ಎಂಜಿಆರ್ ಚೆನ್ಸೆ ಸೆಂಟ್ರಲ್ ವಿಶೇಷ ಎಕ್ಸ್​​​ಪ್ರೆಸ್ ರೈಲು ಜನವರಿ 10 ರಂದು ಬೆಳಿಗ್ಗೆ 08:05 ಕ್ಕೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಅದೇ ದಿನ ಮಧ್ಯಾಹ್ನ 02:40 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್​ನಿಂದ ರೈಲು (07320) ಜನವರಿ 10 ರಂದು ಮಧ್ಯಾಹ್ನ 03:40 ಕ್ಕೆ ಹೊರಟು, ಅದೇ ದಿನ ರಾತ್ರಿ 10:50 ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಯಶವಂತಪುರ, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ವೆಟ್ಟಿ, ಅಂಬೂರು, ಗುಡಿಯಾಟ್ಟಂ, ಕಟಪಾಡಿ, ಶೋಲಿಂಗೂರ್, ಅರಕ್ಕೋಣಂ, ತಿರುವಳೂರು ಮತ್ತು ಪೆರಂಬೂರಿನಲ್ಲಿ ನಿಲುಗಡೆ ಹೊಂದಿದೆ.

ರೈಲು ಸಂಖ್ಯೆ 06569 ಎಸ್‌ಎಂವಿಟಿ ಬೆಂಗಳೂರು-ತೂತುಕುಡಿ ವಿಶೇಷ ಎಕ್ಸ್​​ಪ್ರೆಸ್ ರೈಲು ಜನವರಿ 10 ರಂದು ರಾತ್ರಿ 10:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಜನವರಿ 11 ರಂದು ಬೆಳಿಗ್ಗೆ 11:00 ಗಂಟೆಗೆ ತೂತುಕುಡಿ ತಲುಪಲಿದೆ.  ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರ್, ದಿಂಡಿಗಲ್, ಮಧುರೈ, ವಿರುಡುನಗರ, ಸಾತೂರ್ ಮತ್ತು ಕೋವಿಲ್ಪಟ್ಟಿಯಲ್ಲಿ ನಿಲುಗಡೆ ಇರಲಿದೆ.

ರೈಲು ಸಂಖ್ಯೆ 06570 ಜನವರಿ 11 ರಂದು ಮಧಾಹ್ನ 01:00 ಕ್ಕೆ ತೂತುಕುಡಿಯಿಂದ ಹೊರಟು ಜನವರಿ 12 ರಂದು ಬೆಳಿಗ್ಗೆ 06:30 ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಕೋವಿಲಟ್ರಿ, ಸಾತೂರ್, ವಿರುಡುನಗರ, ಮದುರೆ, ದಿಂಡಿಗಲ್, ಕರೂ‌ರ್, ನಾಮಕ್ಕಲ್, ಸೇಲಂ, ಬಂಗಾರಪೇಟೆ, ಕೃಷ್ಣರಾಜಪುರಂ, ಕೆಎಸ್‌ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ಈ ರೈಲುಗಳು ಪ್ರತಿ ನಿಲ್ದಾಣಕ್ಕೆ ಆಗಮಿಸುವ ಸಮಯ, ನಿರ್ಗಮನ ಸಮಯಕ್ಕೆ www.enquiry.indianrail.gov.in ಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ 139 ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

Related Posts

Leave a Reply

Your email address will not be published. Required fields are marked *