Menu

ಮನ್ರೆಗಾ ಮರು ಜಾರಿಗೆ ಒತ್ತಾಯಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ: ಸಿಎಂ ಸಿದ್ದರಾಮಯ್ಯ

siddaramiah- dk shivakumar

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯುವುದು ಹಾಗೂ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಗುರುವಾರ ತಮ್ಮ ನೇತೃತ್ವದಲ್ಲಿ ನಡೆದ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆ ರದ್ದುಗೊಳಿಸಿರುವ ಹಿಂದೆ ಬಿಜೆಪಿಯವರ ಹುನ್ನಾರ ಅಡಗಿದೆ ಎಂದು ಆರೋಪಿಸಿದರು.

ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು ಎಂದು ಅವರು ವಿವರಿಸಿದರು.

ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಿಲ್ಲವಾಗಿಸಿದೆ. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಜ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ ಎಂದು ಅವರು ಕಿಡಿಕಾರಿದರು.

28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ ಎಂದು ಅವರು ಹೇಳಿದರು.

ಮನ್ರೆಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕು. ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ ಎಂದು ಅವರು ನುಡಿದರು.

ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ಧು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ ಎಂದು ಆರೋಪಿಸಿದರು.

Related Posts

Leave a Reply

Your email address will not be published. Required fields are marked *