Menu

ಭೀಕರ ಕಾರು ಅಪಘಾತದಲ್ಲಿ ವರ ಸೇರಿ 8 ಮಂದಿ ದುರ್ಮರಣ

ಲಕ್ನೋ: ಭೀಕರ ಕಾರು ಅಪಘಾತದಲ್ಲಿ ಮದುವೆ ದಿಬ್ಬಣದಲ್ಲಿದ್ದ ವರ ಸೇರಿದಂತೆ 8 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ನಡೆದಿದೆ.

ಬೊಲೆರೊ ಎಸ್‌ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶನಿವಾರ ಬೆಳಗ್ಗೆ 6:30 ರ ಸುಮಾರಿಗೆ ಜೇವಾನೈ ಗ್ರಾಮದಲ್ಲಿ ಜನತಾ ಇಂಟರ್ ಕಾಲೇಜು ಬಳಿ ವೇಗವಾಗಿ ಹೋಗುತ್ತಿದ್ದ ಬೊಲೆರೊ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.

ವಾಹನದಲ್ಲಿ ಹತ್ತು ಜನರು ಇದ್ದರು. ಅವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು. ಸ್ಥಳದಲ್ಲೇ ಮೃತಪಟ್ಟವರಲ್ಲಿ ವರ ಸೂರಜ್ ಕೂಡ ಸೇರಿದ್ದಾರೆ. ಸಂಭಾಲ್‌ನ ಹರ್ ಗೋವಿಂದಪುರ ಗ್ರಾಮದಿಂದ ನೆರೆಯ ಬುಡೌನ್ ಜಿಲ್ಲೆಯ ಸಿರ್ತೌಲ್‌ನಲ್ಲಿರುವ ವಧುವಿನ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು.

ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಇತರ ಮೂವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬದುಕುಳಿದ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರನ್ನು ಅಲಿಘರ್‌ನ ಉನ್ನತ ವೈದ್ಯಕೀಯ ಕೇಂದ್ರಕ್ಕೆ ರವಾನಿಸಲಾಗಿದೆ.

Related Posts

Leave a Reply

Your email address will not be published. Required fields are marked *