ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಡರಾತ್ರಿ ವಿಧಿವಶರಾಗಿದ್ದಾರೆ. ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಶ್ರೀಗಳ ಅಂತಿಮ ದರ್ಶನವನ್ನು ಇಂದು (ಶನಿವಾರ) ಶ್ರೀಮಠದ ಆವರಣದಲ್ಲೇ ವ್ಯವಸ್ಥೆಗೊಳಿಸಲಾಗಿದೆ.
ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಶ್ರೀಗಳ ಉತ್ತರಾಧಿಕಾರಿಗಳಾದ ನಿಶ್ಚಲಾನಂದನಾಥ ಸ್ವಾಮೀಜಿ ಅಂತ್ಯ ಸಂಸ್ಕಾರದ ವಿಧಿ ವಿಧಾನ ನೇರವೇರಿಸಲಿದ್ದಾರೆ.
ಸ್ವಾಮೀಜಿಯ ನಿಧನಕ್ಕೆ ಡಿಸಿಎಂ ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳ ನಿಧನದ ಸುದ್ದಿ ಆಘಾತ ಮೂಡಿಸಿದೆ. ಭಗವಂತ ಶ್ರೀಗಳ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಭಕ್ತವೃಂದಕ್ಕೆ, ಶಿಷ್ಯರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಆರ್. ಅಶೋಕ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ.
ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ… pic.twitter.com/frbvcx17YC
— DK Shivakumar (@DKShivakumar) August 16, 2025
ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.